BMTC ಬಸ್ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ದುರ್ಮರಣ!
ಬೆಂಗಳೂರು:- ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಿಲ್ದಾಣದಲ್ಲಿ ನಡೆದುಹೋಗುತ್ತಿದ್ದ ಯುವಕನ ಮೇಲೆ ಕೆಎ 57 ಎಫ್ 4330 ಸಂಖ್ಯೆಯ ಬಿಎಂಟಿಸಿ ಬಸ್ ಹರಿದಿದೆ. ಸದ್ಯ ಬಿಎಂಟಿಸಿ ಚಾಲಕ ಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾತ್ರಿ 12.15ರ ಸುಮಾರಿನಲ್ಲಿ ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಯುವಕ ಬಲಿಯಾಗಿದ್ದಾನೆ. ಅತಿ ವೇಗವೇ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ. ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ ಬಗ್ಗೆ ಎಚ್ಚರವಹಿಸುತ್ತಿಲ್ಲ ಎಂದು ಬಿಎಂಟಿಸಿ ಸಿಬ್ಬಂದಿ, ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಜನರು ಆಕ್ರೋಶ ಹೊರ ಹಾಕಿದ್ದಾರೆ. ನಿಲ್ದಾಣದಲ್ಲಿ ಚಾಲಕರು ವೇಗವಾಗಿ ಬಸ್ ಚಲಾಯಿಸುತ್ತಾರೆ. ಬಸ್ ನಿಲ್ದಾಣದಲ್ಲಿ ಹಂಪ್ ಹಾಕಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.