ಹಿಂದೂ ವಿರೋಧಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ: ಎನ್.ರವಿಕುಮಾರ್
ಬೆಂಗಳೂರು: ಹಿಂದೂ ವಿರೋಧಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಹಿಂದೂ ವಿರೋಧಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ. ಅಶ್ವತ್ಥ್ ನೇತೃತ್ವದ ಸತ್ಯಶೋಧನಾ ಸಮಿತಿ ಸ್ಥಳಕ್ಕೆ ಭೇಟಿ ನೀಡಿತ್ತು.
ದೇಶದ್ರೋಹಿ ಸಂಘಟನೆ ಬೆಂಬಲಿಸುವ SDPI ಸಹ ವರದಿಗೆ ಬಂದಿದೆ. ಅಬ್ದುಲ್ ಮಜೀದ್ ನೇತೃತ್ವದ ವರದಿ ನಮಗೆ ಈಗಾಗಲೇ ಗೊತ್ತಾಗಿದೆ. ಹಿಂದೂಗಳೇ ಮೆರವಣಿಗೆ ವೇಳೆ ಕಲ್ಲುತೂರಿದ್ರು ಅಂತಾ ವರದಿ ನೀಡ್ತಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಪ್ಯಾಲೆಸ್ತೇನ್ ಧ್ವಜ ಹಾರಾಟ,ರಾಮೇಶ್ವರಂ ಕೆಫೆ ಮೇಲೆ ಬಾಂಬ್ ಹಾಕಿದ್ದಾರೆ. ಕುಕ್ಕರ್ ಬ್ಲಾಸ್ಟ್ ಮಾಡುತ್ತಾರೆ. ಕರ್ನಾಟಕ ಸೇಫ್ ಅಂತ ಅವರಿಗೆ ಅನ್ನಿಸಿದೆ ಎಂದು ಕಿಡಿಕಾರಿದರು.