ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ; ಅತ್ಯಾಚಾರ ಪ್ರಕರಣ ದಾಖಲು
ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪರಪ್ಪನ ಅಗ್ರಹಾರ ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ.
ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.