ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಬ್ಲೇಡ್ ನಿಂದ ಯುವಕನ ಮೇಲೆ ಅಟ್ಯಾಕ್ ಮಾಡಿದ ವ್ಯಕ್ತಿ!
ಚಿಕ್ಕಮಗಳೂರು : ನಗರದ ಗವನಗಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಅಟ್ಯಾಕ್ ಮಾಡಲಾಗಿದೆ. ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ ನಡೆದು ಯುವಕನ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜರುಗಿದೆ.
ಗೌತಮ್ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ. ತಿಮ್ಮ ಎಂಬುವವನಿಂದ ಕೃತ್ಯ ನಡೆದಿದೆ. ಚಿಕ್ಕಮಗಳೂರು ನಗರದ ಗವನಗಳ್ಳಿಯಲ್ಲಿ ಘಟನೆ ಜರುಗಿದೆ.
ಸಧ್ಯ ಗಾಯಾಳು ಗೌತಮ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.