ಮೊದಲ ಬಾರಿಗೆ ಬಳ್ಳಾರಿ ಜೈಲಿಗೆ ಬಂದ ಮೀನಾ ತೂಗುದೀಪ.!
ಬಳ್ಳಾರಿ: ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚಚರರನ್ನು ಬಂಧಿಸಲಾಗಿದೆ. ಈಗಾಗಲೇ ಅವರು ಜೈಲು ಸೇರಿ ಮೂರು ತಿಂಗಳು ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 3991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇನ್ನೂ ದರ್ಶನ್ ತಾಯಿ ಮೀನಾ ತೂಗುದೀಪ ಒಮ್ಮೆಯೂ ಮಗನನ್ನು ನೋಡಲು ಬಳ್ಳಾರಿ ಜೈಲಿಗೆ ಹೋಗಿರಲಲ್ಲ. ಇದರಿಂದ ಬೇಸರಗೊಂಡಿದ್ದ ದರ್ಶನ್ ತಾಯಿಯನ್ನು ನೋಡಬೇಕು ಎಂದು ಹಂಬಲಿಸಿದ್ದರು. ಇದೀಗ ಮಗನನ್ನು ನೋಡಲು ತಾಯಿ ಮೀನಾ ತೂಗುದೀಪ ಮಗಳ ಜೊತೆ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.
ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ದರ್ಶನ್ ನೋಡಲು ಮೀನಾ ಬಂದಿರಲಿಲ್ಲ. ಇದೀಗ ದರ್ಶನ್ ತಾಯಿ, ಸಹೋದರಿ ದಿವ್ಯಾ, ಬಾವ ಮಂಜುನಾಥ ಹಾಗೂ ಅಕ್ಕನ ಮಕ್ಕಳು ಆಗಮಿಸಿ ದರ್ಶನ್ ಕುಶಲೋಪರಿ ವಿಚಾರಿಸಿದ್ದಾರೆ. ದರ್ಶನ್ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ. ಮಡದಿ ವಿಜಯಲಕ್ಷ್ಮೀ, ಸ್ನೇಹಿತರು ಈಗಾಗಲೇ ದರ್ಶನ್ರನ್ನು ಭೇಟಿ ಮಾಡಿದ್ದಾರೆ.