ಈ ಬಾರಿಯ ಮೈಸೂರು ದಸರಾ ಹಂಪ ನಾಗರಾಜಯ್ಯರಿಂದ ಉದ್ಘಾಟನೆ!
ಮೈಸೂರು: ನಾಡಹಬ್ಬ ದಸರಾ 2024 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೈಸೂರಲ್ಲಿ ಸಕಲ ಸಿದ್ಧತೆ ನಡೆದಿದ್ದು , ಐತಿಹಾಸಿಕ ಜಂಬೂಸವಾರಿಗೆ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ನಡೆಸಲಾಗಿದೆ. ಇದೆಲ್ಲದರ ನಡುವೆ ಮೈಸೂರು ದಸರಾ 2024 ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರಾಗಿದ್ದು, ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಆಹ್ವಾನ ನೀಡಲಾಗಿದೆ.