ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮೊದಲ ಜಾಮೀನು ಮಂಜೂರು!
ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಜಾಮೀನು ಮಂಜೂರಾಗಿದೆ. ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.
ಆರಂಭದಲ್ಲಿ ಕೇಶವಮೂರ್ತಿ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಕೇಶವಮೂರ್ತಿಗೆ ಇಂದು ಜಾಮೀನು ಸಿಕ್ಕಿದೆ ಎಂದು ಹೇಳಲಾಗಿದೆ.