ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಕುರಿತಾದ ಹೈಕೋರ್ಟ್ ತೀರ್ಪು ಇಂದು ಪ್ರಕಟವಾಗಲಿದೆ. ಸಿದ್ದರಾಮಯ್ಯ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದ್ರೆ ಮುಡಾದಿಂದ ಅಕ್ರಮವಾಗಿ 14 ಸೈಟ್‌ಗಳನ್ನು ಪಡೆದಿರುವ ಆರೋಪವಿದೆ. ಇದೇ ಪ್ರಕರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ.
ಸಾವಿರಾರು ಪುಟಗಳ ದಾಖಲೆ, 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಪ್ರಕಟಕ್ಕೆ ಮುಹೂರ್ತ ಫಿಕ್ಸ್ ಮಾಡಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ತೀರ್ಪು ಪ್ರಕಟಿಸಲಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದರೆ ಸಿದ್ದರಾಮಯ್ಯ ನಿರಾಳರಾಗಬಹುದು.
ಒಂದು ಅರ್ಥದಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಲಿದೆ. ಅಷ್ಟೇ ಅಲ್ಲ ರಾಜ್ಯ ರಾಜಕೀಯದಲ್ಲಿ ಮತ್ತು ಸರ್ಕಾರದಲ್ಲಿ ಸಿದ್ದರಾಮಯ್ಯ ಶಕ್ತಿ ಮತ್ತಷ್ಟು ಹೆಚ್ಚಲಿದೆ. ಪಕ್ಷದೊಳಗೆ ಸಿಎಂ ಬದಲಾವಣೆಯ ಕೂಗಿಗೂ ಫುಲ್‌ಸ್ಟಾಪ್ ಬೀಳಲಿದೆ. ಇನ್ನು ಸಿಎಂ ರಾಜೀನಾಮೆಗೆ ಪಟ್ಟುಹಿಡಿದಿರುವ ವಿಪಕ್ಷಗಳಿಗೂ ಹಿನ್ನಡೆಯಾಗಲಿದೆ.