ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯಗೆ ಹಿನ್ನೆಡೆ: ಇದು ಸತ್ಯಕ್ಕೆ ಸಂದ ಜಯ; ದೂರುದಾರ ಸ್ನೇಹಮಯಿ ಕೃಷ್ಣ!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯಗೆ ಹಿನ್ನೆಡೆ ಆಗಿರುವ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಆದೇಶದ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ. ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ. ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದರು.