ಮುಸ್ಲಿಮರ ಕುರಿತು ಪ್ರಚೋಧನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ FIR
ಯಾದಗಿರಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯದ ನಾಗಮಂಗಲ ಗಲಭೆ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ನಡೆದ ಕಲ್ಲುತೂರಾಟ ಪ್ರಕರಣಗಳನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾದಗಿರಿಯ ಶಹಾಪುರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದೇ 21ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾ ಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗಿಯಾಗಿ ಭಾಷಣ ಮಾಡಿದ್ದರು. ಆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಅವರ ಮೇಲಿದೆ. ಪರಮಾಣು ಬಾಂಬ್ ಸಿದ್ಧಪಡಿಸುವುದನ್ನು ಕಂಡುಹಿಡಿದ ಹಿಂದುಗಳಿಗೆ ಪೆಟ್ರೋಲ್ ಬಾಂಬ್ ತಯಾರಿಸಲು ಬರುವುದಿಲ್ಲವೇ? ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣಮಾತ್ರದಲ್ಲಿ ಮಾಡಲು ಹಿಂದುಗಳಿಗೆ ಬರುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದ್ದರು.