ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಸಿಎಂ ರಾಜೀನಾಮೆಗೆ ಒತ್ತಾಯಿಸಿ ನಿನ್ನೆ ವಿಧಾನಸೌಧ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದರ ನಡುವೆ ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್ಐಆರ್ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಎಫ್ಐಆರ್ ದಾಖಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಎಸ್ಪಿ ವಿರುದ್ಧವೇ ದೂರು ನೀಡಿದ್ದಾರೆ.