ಮಣ್ಣು ಕುಸಿತ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ಓರ್ವ ಸಾವು, ಇಬ್ಬರು ಗಂಭೀರ!
ಹಾಸನ:- ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
ದರ್ಶನ್‌ಕುಮಾರ್ ಮೃತ ದುರ್ದೈವಿ. ವಸಂತ್‌ಕುಮಾರ್ ಹಾಗೂ ಲೋಕಪ್ಪ ಗಾಯಾಳುಗಳು ಎನ್ನಲಾಗಿದೆ. ಹಾಸನದ ಪ್ರಕಾಶ್ ಎಂಬುವವರು ಕೆರೆ ಕೋಡಿ ದುರಸ್ತಿ ಗುತ್ತಿಗೆ ಪಡೆದಿದ್ದು, ದರ್ಶನ್‌ಕುಮಾರ್, ವಸಂತ್‌ಕುಮಾರ್ ಹಾಗೂ ಲೋಕಪ್ಪ ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಮಣ್ಣು ಕುಸಿದಿದೆ. ದರ್ಶನ್‌ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲೋಕಪ್ಪ ಹಾಗೂ ವಸಂತ್‌ಕುಮಾರ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.