ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ಗೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನೂ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್ನಲ್ಲಿ ರಾಜಕಾರಣಿಗಳು, ಕ್ರಿಕೆಟರ್ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.
ಇನ್ನೂ ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್ಗಳು ಬಂದಿರುವ ಪ್ರಕರಣ ಇವೆ.