No menu items!
10.9 C
Munich
Sunday, September 27, 2026

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ!

Must read

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆಯಾಗಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಸಿಸಿಹೆಚ್ 57ರಲ್ಲಿ ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

- Advertisement -spot_img

More articles

- Advertisement -spot_img

Latest article