ಟೊಮ್ಯಾಟೊ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ!? ಇದು ನೀವು ತಿಳಿಯಲೇಬೇಕು!
ಟೊಮೆಟೊ ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣ ಎಂಬುದು ನಿಮಗೆ ತಿಳಿದೆದೆಯೇ..? ಹಾಗಾದರೆ ಇಲ್ಲಿ ತಿಳಿದುಕೊಳ್ಳಿ.
ಹೃದಯವನ್ನು ಆರೋಗ್ಯವಾಗಿಡುತ್ತದೆ
ಟೊಮೆಟೊ ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದರ ನಿಯಮಿತ ಸೇವನೆಯು ರಕ್ತದಲ್ಲಿನ ಟ್ರೈಗ್ಲಿಸರೈಡ್‌ಗಳ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯಾಘಾತವನ್ನು ತಡೆಯುತ್ತದೆ.
ಕ್ಯಾನ್ಸರ್ ಅಪಾಯದಿಂದ ದೂರವಿಡುತ್ತದೆ
ಟೊಮೆಟೊದಲ್ಲಿ ಲೈಕೋಪೀನ್ ನಂತಹ ಉತ್ಕರ್ಷಣ ನಿರೋಧಕಗಳಿದ್ದು, ಅವು ಕ್ಯಾನ್ಸರ್ ಕೋಶಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಗಂಟಲು, ಬಾಯಿ, ಹೊಟ್ಟೆ, ಸ್ತನ ಮುಂತಾದ ದೇಹದ ಭಾಗದಲ್ಲಿ ಹುಟ್ಟಿಕೊಳ್ಳುವ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
ಮೂಳೆಗಳನ್ನು ಬಲಿಷ್ಠಗೊಳಿಸುತ್ತದೆ
ಟೊಮ್ಯಾಟೊದಲ್ಲಿರುವ ವಿಟಮಿನ್ ಮತ್ತು ಕ್ಯಾಲ್ಸಿಯಂ ಮೂಳೆ ಅಂಗಾಂಶಗಳನ್ನು ಸರಿಪಡಿಸಲು ಮತ್ತು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ನಿಯಮಿತ ಸೇವನೆಯು ಮಿದುಳಿನ ರಕ್ತಸ್ರಾವವನ್ನು ತಡೆಯುವಲ್ಲಿ ಸಹ ಬಹಳ ಪರಿಣಾಮಕಾರಿಯಾಗಿದೆ.
ಮಧುಮೇಹವಿದ್ದವರಿಗೆ ಅಮೃತವಿದ್ದಂತೆ
ಟೊಮೆಟೊಗಳು ಕ್ರೋಮಿಯಂನ ಉತ್ತಮ ಮೂಲವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಮತ್ತು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದು ಮೂತ್ರದಲ್ಲಿನ ಸಕ್ಕರೆಯ ಶೇಕಡಾವಾರು ಪ್ರಮಾಣವನ್ನು ನಿಯಂತ್ರಿಸುತ್ತದೆ. ಟೈಪ್-2 ಡಯಾಬಿಟಿಸ್ ರೋಗಿಗಳಿಗೆ ನಿಯಮಿತವಾಗಿ ಟೊಮೆಟೊ ಸೇವನೆಯು ಪ್ರಯೋಜನಕಾರಿಯಾಗಿದ
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
ಟೊಮೆಟೊ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಕ್ಲೋರಿನ್ ಮತ್ತು ಸಲ್ಫರ್ ನಿಂದಾಗಿ ಲಿವರ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಗ್ಯಾಸ್ ಸಮಸ್ಯೆ ದೂರವಾಗುತ್ತದೆ. ಮಧ್ಯಮ ಗಾತ್ರದ ಟೊಮೆಟೊವು ಕೆಲವು ಕ್ಯಾಲೊರಿಗಳನ್ನು ಹೊಂದಿರುತ್ತದೆ. ಇದು ತೂಕವನ್ನು ಕಡಿಮೆಮಾಡಿಕೊಳ್ಳಲು ಸೂಕ್ತವಾಗಿದೆ.