ಹಾಸ್ಯ ನಟ ಹುಲಿ ಕಾರ್ತಿಕ್ ವಿರುದ್ಧ ಎಫ್‌ಐಆರ್ ದಾಖಲು!
ಬೆಂಗಳೂರು: ಬೋವಿ ಜನಾಂಗಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪದ ಬಳಕೆ ಮಾಡಲಾಗಿದೆ ಎಂದು ಗಿಚ್ಚಿ ಗಿಲಿಗಲಿ ಖ್ಯಾತಿಯ ಕಾರ್ಯಕ್ರಮದ ವಿನ್ನರ್ ಹುಲಿ ಕಾರ್ತಿಕ್ ಮೇಲೆ FIR ದಾಖಲಾಗಿದೆ. ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಲಿ ಕಾರ್ತಿಕ್ ಅವರು ಯಾವುದೋ ರೋಡ್ ಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ ಎಂದು ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹು
ಈ ಪದ ಬಳಕೆ ಬೋವಿ ಜನಾಂಗಕ್ಕೆ ನೋವುಂಟು ಮಾಡಿದ್ದು, ಲೋಕೇಶ್ ಎಂಬುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ