ರೇಣುಕಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು.
ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ಎಸ್‌ಪಿಪಿ ಪ್ರಸನ್ನಕುಮಾರ್ ಅವರು ನಾಳೆ ವಾದ ಮುಕ್ತಾಯ ಮಾಡಲು ಪ್ರಯತ್ನಿಸುತ್ತೇನೆ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಅ.9ಕ್ಕೆ ನ್ಯಾಯಾಧೀಶರು ಮುಂದೂಡಿದ್ದಾರೆ.