ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯ: ಅಕ್ಟೋಬರ್ 14ಕ್ಕೆ ಆದೇಶ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಅಂತ್ಯವಾಗಿದ್ದು, ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 14 ರಂದು ನ್ಯಾಯಾಧೀಶರು ಹೊರಡಿಸಲಿದ್ದಾರೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಬಂಧಿಯಾಗಿರುವ ದರ್ಶನ್ ಬೇಲ್ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ.
ದರ್ಶನ್ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್ಪಿಪಿ ಪ್ರಸನ್ನ ಕುಮಾರ್ ನಡುವೆ ತುರುಸಿನ ವಾದ-ಪ್ರತಿವಾದಗಳು ನಡೆದಿವೆ. ಇಬ್ಬರೂ ವಕೀಲರು ಕಟುವಾದ ವಾದ ಸರಣಿಯನ್ನು ನ್ಯಾಯಾಲಯದ ಮುಂದಿರಿಸಿದ್ದಾರೆ. ಇಂದೂ ಸಹ ವಾದ ನಡೆದಿದ್ದು, ಇಬ್ಬರೂ ವಕೀಲರು ತಮ್ಮ ವಾದಗಳನ್ನು ಅಂತ್ಯಗೊಳಿಸಿದ್ದು, ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ.