No menu items!
14.4 C
Munich
Monday, May 4, 2026

ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ: ಸಚಿವ ಜೋಶಿ

Must read

ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ: ಸಚಿವ ಜೋಶಿ

ಹುಬ್ಬಳ್ಳಿ: ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ.
ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ. ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ ಎಂದರು.
ಇನ್ನೂ ದೇಶಾದ್ಯಂತ ಈ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆಗೆ 18 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ರಾಜ್ಯ ಸರ್ಕಾರ ಅನ್ನ ಭಾಗ್ಯ ಘೋಷಣೆ ಮಾಡಿದ್ದಷ್ಟೇ. ಯಾವ ಭಾಗ್ಯವೂ ಇಲ್ಲ. ಕೇಂದ್ರ ಸರ್ಕಾರ ಪೂರೈಸುವ 5 ಕೆಜಿ ಅಕ್ಕಿಯನ್ನಷ್ಟೇ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.

- Advertisement -spot_img

More articles

- Advertisement -spot_img

Latest article