ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು–ದರ್ಭಾಂಗ ಎಕ್ಸ್‌ಪ್ರೆಸ್: ಹಲವು ಮಂದಿಗೆ ಗಾಯ

Date:

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು–ದರ್ಭಾಂಗ ಎಕ್ಸ್‌ಪ್ರೆಸ್: ಹಲವು ಮಂದಿಗೆ ಗಾಯ

ಮೈಸೂರು – ದರ್ಭಾಂಗ ಎಕ್ಸ್ಪ್ರೆಸ್ ರೈಲು ಮತ್ತು ಗೂಡ್ಸ್ ರೈಲು ನಡುವೆ ಭೀಕರ ಅಪಘಾತವಾಗಿದೆ. ಮೈಸೂರಿನಿಂದ ದರ್ಭಾಂಗ್ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್ಪ್ರೆಸ್ ರೈಲು, ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪ್ಯಾಸೆಂಜರ್ ರೈಲು ಮತ್ತು ಗೂಡ್ಸ್ ರೈಲಿನ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ಕು ಎಸಿ ಕೋಚ್ ಗಳಿಗೆ ಹಾನಿಯಾಗಿದ್ದು, ಹಳಿ ತಪ್ಪಿದೆ. ಜೊತೆಗೆ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೈಲಿನ ಕಿಟಕಿಗಳ ಮೂಲಕ ಕೆಲವು ಪ್ರಯಾಣಿಕರು ಹೊರ ಬಂದಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಜಿಲ್ಲಾಡಳಿತ ಕಾರ್ಯಾಚರಣೆಯಲ್ಲಿ ತೊಡಗಿದೆ. ನಿಂತಿದ್ದ ಗೂಡ್ಸ್ ಟ್ರೇನ್ ಗೆ ಪ್ರಯಾಣಿಕ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈಲಿನಿಂದ 6 ಬೋಗಿಗಳು ಪ್ರತ್ಯೇಕಗೊಂಡ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 1.50ಕ್ಕೆ ಬೆಂಗಳೂರಿನಿಂದ ನಾಗಪುರಕ್ಕೆ ರೈಲು ಹೊರಟಿತ್ತು. ಕರ್ನಾಟಕದಿಂದ 45 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಕೆಲವರು ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಟ್ರೇನ್ ನಲ್ಲಿದ್ದ ಬೆಂಗಳೂರಿಗರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...