415ನೇ ಜಂಬೂ ಸವಾರಿಗೆ ನೀಡಿದ ಸಿಎಂ ಸಿಎಂ ಸಿದ್ದರಾಮಯ್ಯ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ 415ನೇ ಜಂಬೂಸವಾರಿ ಅದ್ದೂರಿಯಾಗಿ ನೆರವೇರಿದೆ. ಪಟ್ಟದ ಆನೆ ಕ್ಯಾಪ್ಟನ್ ಅಭಿಮನ್ಯು ಸಂಭ್ರಮದಿಂದ ಅಂಬಾರಿಯನ್ನು ಹೊತ್ತು ಸಾಗಿದ್ದಾನೆ. ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಮೈಸೂರಿನ ಬೀದಿ ಬೀದಿಗಳಲ್ಲಿ ಗಾಂಭೀರ್ಯದಿಂದ ಸಾಗಿದ್ದಾನೆ. ಈ ವೇಳೆ ಅಭಿಮನ್ಯುಗೆ 09 ಆನೆಗಳು ಸಾಥ್ ನೀಡಿದವು.