ನಿರ್ಮಾಣ ಹಂತದ ಕಟ್ಟಡ ಕುಸಿತ: ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ – ಸಿಎಂ

Date:

ನಿರ್ಮಾಣ ಹಂತದ ಕಟ್ಟಡ ಕುಸಿತ: ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ – ಸಿಎಂ

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು,
ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ರೆವಿನ್ಯೂ ಬಡಾವಣೆಯಾಗಿದ್ದು,
ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.
ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಜನರಲ್ಲಿ ಸಿಎಂ ಮನವಿ
ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ , ಈ ದುರಾದೃಷ್ಟರ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು , ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು.
ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನುಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...