ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕನಿಗೆ 7 ವರ್ಷ ಜೈಲು!
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ನ್ಯಾಯಾಲಯ ಆದೇಶ ಹೊರಸಿತ್ತು. ಸದ್ಯ ಇದೀಗ ಕಾರವಾರದ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ 7 ವರ್ಷ ಸಜೆ,
ಒಳಸಂಚು ಆರೋಪ ಪ್ರಕರಣದಲ್ಲಿ 5 ವರ್ಷ ಹಾಗೂ ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಸಜೆ ವಿಧಿಸಿ ಕೋರ್ಟ್ ಆದೇಶಿಸಿದೆ. ಜೊತೆಗೆ, ಒಟ್ಟು 9 ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ. ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್ಗೆ 7 ವರ್ಷದಷ್ಟು ಜೈಲು ಶಿಕ್ಷ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ.