ಯಾವತ್ತಾದರೂ ಮಸೀದಿ, ಚರ್ಚ್’ಗಳಲ್ಲಿ ಹಿಡಿ ಅನ್ನ ಹಾಕಿದ್ದೀರಾ: ಪ್ರತಾಪ್ ಸಿಂಹ ಪ್ರಶ್ನೆ
ಮೈಸೂರು: ಯಾವತ್ತಾದರೂ ಮಸೀದಿ ಚರ್ಚ್ಗಳಲ್ಲಿ ಹಿಡಿ ಅನ್ನವನ್ನು ಯಾರಿಗಾದರೂ ಬಡಿಸಿದ್ದೀರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ಗಳಲ್ಲಿ ಹಿಡಿ ಅನ್ನವನ್ನು ಯಾರಿಗಾದರೂ ಬಡಿಸಿದ್ದೀರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.
ಇನ್ನೂ ಸಿಎಂ ಸಿದ್ದರಾಮಯ್ಯಗೆ ಮುಡಾ ಕಷ್ಟ ಎದುರಾದಾಗ ಚಾಮುಂಡಿ ತಾಯಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿಎಂಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಸಿಎಂ ಈಗ ಹಿಂದೂಗಳ ವಿರುದ್ಧ ನಿಲುವು ತೆಗೆದುಕೊಳ್ಳವುದಿಲ್ಲ ಎಂದುಕೊಂಡಿದ್ದೇನೆ ಎಂದು ಪ್ರತಾಪ್ ಸಿಂಹ ಹೇಳಿದರು. ಪ್ರಧಾನ ಮಂತ್ರಿಗಳು ವಕ್ಫ್ ಕಾಯ್ದೆ, ವಕ್ಫ್ ಬೋರ್ಡ್ ಅನ್ನೇ ರದ್ದು ಮಾಡಬೇಕು ಎಂದೂ ಅವರು ಆಗ್ರಹಿಸಿದರು.