ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP!

Date:

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಹೀಗಾಗಿ ಬೆಂಗಳೂರು ಮಹಾನಗರ ಪಾಲಿಕೆ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಮೇರೆಗೆ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ.

ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.

ಈ ಮೂರು ದಿನಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆ ಅವಧಿಯಲ್ಲಿ ಮಾತ್ರ ಹಸಿರು ಪಟಾಕಿ ಸಿಡಿಸಬೇಕು. ಅದರ ಹೊರತಾಗಿ ಬೇಕಾಬಿಟ್ಟಿ ಪಟಾಕಿ ಸಿಡಿಸುವುದಕ್ಕೆ ಕೆಎಸ್‌ಪಿಸಿಬಿ ಸೂಚನೆಯಂತೆ ಪಾಲಿಕೆ ನಿಷೇಧಿಸಿದೆ.

ಅನಗತ್ಯವಾಗಿ ಪಟಾಕಿ ಮನೆ ಹಾಗೂ ಇತರೆ ಜಾಗದಲ್ಲಿ ಶೇಖರಣೆ ಮಾಡದಂತೆಯೂ ಸೂಚನೆ ನೀಡಲಾಗಿದೆ. ಆನ್‌ಲೈನ್‌ನಲ್ಲೂ ಬೇಕಾಬಿಟ್ಟಿ ಸ್ಫೋಟಕ ಪಟಾಕಿ ಮಾರಾಟ ಮಾಡದಂತೆ ತಾಕೀತು ಮಾಡಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶ ಸಂಖ್ಯೆ ಉಲ್ಲೇಖಿಸಿ ಸಾರ್ವಜನಿಕ ಸುತ್ತೋಲೆ ಹೊರಡಿಸಲಾಗಿದೆ.

ಕಳೆದ ವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಇದೀಗ ಅಧಿಕೃತವಾಗಿ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...