ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ, ಓರ್ವ ಅರೆಸ್ಟ್!

Date:

ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ, ಓರ್ವ ಅರೆಸ್ಟ್!

ಬೆಂಗಳೂರು:- ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 5 ಲಕ್ಷ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ ಮಾಡಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ.

ಈ ಘಟನೆ ರಾಜಧಾನಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಜರುಗಿದೆ. ದಕ್ಷಿಣ ವಿಭಾಗದ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಆರೋಪಿ ಪುರುಷೋತ್ತಮ್ ಮನೆ ಮೇಲೆ ರೇಡ್ ಮಾಡಿ ಬಂಧಿಸಲಾಗಿದೆ. ಮನೆಯಲ್ಲಿದ್ದ ಮದ್ಯದ ಬಾಟಲಿ ನೋಡಿ ಒಂದು ಕ್ಷಣ ಅಬಕಾರಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ

ಸದ್ಯ ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ) ಹಾಗೂ 43(ಎ) ಅಡಿ ಕೇಸ್ ದಾಖಲಿಸಲಾಗಿದ್ದು, 144 ಬಾಟಲ್​ಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿ ಪುರುಷೋತ್ತಮ್​​​ ಗೋವಾದಲ್ಲಿರುವ ಅಂಗಡಿಯವರ ಜತೆ ಸಂಪರ್ಕ ಹೊಂದಿದ್ದು, ಕಡಿಮೆ ಬೆಲೆಗೆ ಮದ್ಯ ತರಿಸಿಕೊಳ್ಳುತ್ತಿದ್ದ. ಗೋವಾದಿಂದ ಬಸ್​​ನಲ್ಲಿ ಮದ್ಯದ ಬಾಟಲ್ ಲೋಡ್ ಮಾಡಿ ಕಳಿಸುತ್ತಿದ್ದು, ಬೆಂಗಳೂರಿಗೆ ಬಸ್​ ಬರ್ತಿದ್ದಂತೆ ಪುರುಷೋತ್ತಮ್ ಇಳಿಸಿಕೊಳ್ಳುತ್ತಿದ್ದ. ಬಳಿಕ ಮದ್ಯದ ಬಾಟಲ್​ಗಳನ್ನ ಮನೆಯಲ್ಲಿ ಸಂಗ್ರಹಿಸಿಡುತ್ತಿದ್ದ.

ಅ.27ರಂದು ಬನಶಂಕರಿ 2ನೇ ಹಂತದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಆರೋಪಿ ಪುರುಷೋತ್ತಮ್ ನಿಂತಿದ್ದ. ಆತನ ಚಲನವಲನ ಅಬಕಾರಿ ಸಿಬ್ಬಂದಿಗೆ ಅನುಮಾನ ಮೂಡಿಸಿತ್ತು. ಈ ವೇಳೆ ಬ್ಯಾಗ್ ತೆಗೆದು ಪರಿಶೀಲಿಸಿದಾಗ ಗೋವಾದಲ್ಲಿ ಮಾತ್ರ ಮಾರಾಟ ಎಂದು ಬಾಟಲ್ ಮೇಲೆ ನಮೂದಿಸಿರುವುದು ಪತ್ತೆ ಆಗಿದೆ.

ಬಳಿಕ ಆರೋಪಿ ಮೊಬೈಲ್ ಪರಿಶೀಲನೆ ನಡೆಸಿದ ಅಬಕಾರಿ ಸಿಬ್ಬಂದಿ, ಈ ವೇಳೆ ಗೋವಾದ ಮದ್ಯದ ಅಂಗಡಿ ಜೊತೆಗಿನ ನಂಟು ಬಯಲಾಗಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...