ಕನ್ನಡಿಗರ ಅವಹೇಳನ ಮಾಡುವವರ ವಿರುದ್ಧ ಸರ್ಕಾರದಿಂದ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನ್ನಡಿಗರ ಅವಹೇಳನ ಮಾಡುವವರ ವಿರುದ್ಧ ಸರ್ಕಾರದಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮದಲ್ಲಿ ಕನ್ನಡ ಮತ್ತು ಕನ್ನಡಿಗರ ಅವಹೇಳನ ಮಾಡುವುದು, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ.
ಇದು ನಾಡದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರ ಅವಹೇಳನ ಮಾಡುವವರ ವಿರುದ್ಧ ಸರ್ಕಾರದಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇವತ್ತು ಕನ್ನಡಿಗರಾಗುತ್ತೇವೆ ಎಂದು ಶಪಥ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನೂ ಕನ್ನಡ ದೀವಿಗೆ ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಕ್ಕಳಿಗಾಗಿ ದೀವಿಗೆ ಬಿಡುಗಡೆ ಮಾಡಿದ್ದೇವೆ. ಎಲ್ಲರೂ ಕೂಡ ಕನ್ನಡ ಭಾಷೆ ಮಾತನಾಡಬೇಕು. ಭಾಷೆ ಕುರಿತು ದುರಾಭಿಮಾನ ಇರಬಾರದು, ಅಭಿಮಾನ ಇರಬೇಕು. ಕನ್ನಡ ಮಾತನಾಡಲು ಬರದೇ ಇರುವವರ ಬಳಿ ಬೇರೆ ಭಾಷೆ ಮಾತನಾಡಬಾರದು. ಕನ್ನಡವನ್ನೇ ಅವರಿಗೆ ಕಲಿಸಬೇಕು ಎಂದು ಸಿಎಂ ಹೇಳಿದರು.