ಹಾಸನಾಂಬೆ ದರ್ಶನಕ್ಕೆ ಇಂದು ಲಾಸ್ಟ್ ಡೇ: ನಾಳೆ ಬಾಗಿಲು ಕ್ಲೋಸ್!

Date:

ಹಾಸನಾಂಬೆ ದರ್ಶನಕ್ಕೆ ಇಂದು ಲಾಸ್ಟ್ ಡೇ: ನಾಳೆ ಬಾಗಿಲು ಕ್ಲೋಸ್!

ಹಾಸನ:- ಹಾಸನಾಂಬೆ ದರ್ಶನಕ್ಕೆ ಇಂದು ಲಾಸ್ಟ್ ಡೇ ಆಗಿದ್ದು, ನಾಳೆ ಬಾಗಿಲು ಕ್ಲೋಸ್ ಆಗಲಿದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಬಾಗಿಲು ತೆರೆಯುವ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಇರುವ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

ಸಂಪ್ರಾಯದಂತೆ ನವೆಂಬರ್​ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 24 ರಂದು ಮಧ್ಯಾಹ್ನ 12:15 ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿತ್ತು. ಅಂದಿನಿಂದ ಇವತ್ತಿನವರೆಗೆ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಬಂದು ಹಾಸನಾಂಬೆಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ದೇವಿಯ ದರ್ಶನಕ್ಕೆ ಭಕ್ತ ಗಣ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದೆ. ಹೀಗಾಗಿ ದೇವಾಲಯದ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

 

ಹಾಸನಾಂಬೆಯ ನೈವೇದ್ಯಕ್ಕಾಗಿ ರಾತ್ರಿ 12 ಗಂಟೆಗೆ ಅರ್ಚಕರು ಬಾಗಿಲು ಮುಚ್ಚಿದ್ದರು. ಮತ್ತೆ ಇಂದು ಬೆಳಗಿನ ಜಾವ 4 ಗಂಟೆಗೆ ಬಾಗಿಲು ತೆರೆದಿದ್ದು ದರ್ಶನ ಆರಂಭಿಸಲಾಗಿದೆ. ದರ್ಶನದ ಸಂಬಂಧ ಹಲವು ಸಮಸ್ಯೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಿಬ್ಬಂದಿ ನಿನ್ನೆಯಿಂದ ವಿವಿಐಪಿ ಹಾಗೂ ವಿಐಪಿ ಪಾಸ್​ಗಳನ್ನು ರದ್ದು ಮಾಡಿ ಎಲ್ಲರಿಗೂ ಸಾಮಾನ್ಯ ದರ್ಶನದಲ್ಲಿ ಕಳುಹಿಸಲಾಗುತ್ತಿದೆ. ನಾಳೆ ಬೆಳಗಿನ ಜಾವ 4 ಗಂಟೆವರೆಗೆ ನಿರಂತವಾಗಿ ದೇವಿ ದರ್ಶನಕ್ಕೆ ಭಕ್ತರಿಗೆ ಸಿಗಲಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...