ಮುಂದಿನ ದಿನದಲ್ಲಿ ಜನತಾದಳಕ್ಕೆ ಯಾವುದೇ ಭವಿಷ್ಯ ಇಲ್ಲ: ಡಿಕೆ ಶಿವಕುಮಾರ್
ಮಂಗಳೂರು: ಮುಂದಿನ ದಿನದಲ್ಲಿ ಜನತಾದಳಕ್ಕೆ ಯಾವುದೇ ಭವಿಷ್ಯ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯೋಗೇಶ್ವರ್ ಪಕ್ಷಾಂತರಿ ಒಪ್ಪುತ್ತೇನೆ. ಕಾಂಗ್ರೆಸ್, ಬಿಜೆಪಿ ಎಲ್ಲಾ ಕಡೆನೂ ಹೋದರು. ಎನ್ಡಿಎ ಸರಿ ಇಲ್ಲ, ಕುಮಾರಸ್ವಾಮಿ ಸರಿ ಇಲ್ಲ ಎಂದು ಎಂಎಲ್ಸಿ ಸ್ಥಾನ ಬಿಟ್ಟು ನಮ್ಮ ಜೊತೆ ಬಂದಿದ್ದಾರೆ. ಅವರು ಟಿಕೆಟ್ ಕೊಡುತ್ತೇನೆ ಅಂತ ಹೇಳಿದ್ರೋ ಬಿಡ್ತೀನಿ ಅಂದ್ರೋ ನನಗೆ ಗೊತ್ತಿಲ್ಲ.
ನಾನಿವತ್ತು ಚನ್ನಪಟ್ಟಣ ತಾಲೂಕಿಗೆ ವಿದ್ಯಾವಂತ, ಬುದ್ದಿವಂತನ ಆಯ್ಕೆ ಮಾಡಿ ನಮ್ಮ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ನಿಮ್ಮ ಸೇವೆ ಮಾಡುತ್ತೇವೆ. ನೂರಾರು ಕೋಟಿ ರೂ. ಕೆಲಸ ಆಗಲೇ ಶುರು ಮಾಡಿದ್ದೇವೆ. ಸಾವಿರಾರು ಜನ ಬಡವರು ಬಂದು ಅರ್ಜಿ ಕೊಟ್ಟಿದ್ದಾರೆ, ಅವರಿಗೆ ಸ್ಪಂದಿಸುತ್ತೇವೆ. ಜನತಾದಳಕ್ಕೆ ಯಾವುದೇ ಭವಿಷ್ಯ ಇಲ್ಲ, ಭವಿಷ್ಯ ಇರೋ ನಾವು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.