ಕುಮಾರಸ್ವಾಮಿ ಮತ್ತು ನಿಖಿಲ್ ಕಣ್ಣೀರು ಹಾಕಿರೋ ವಿಚಾರ: ಸಚಿವ ಮಹದೇವಪ್ಪ ಹೇಳಿದ್ದೇನು..?
ಚುನಾವಣೆ ಬಂದಾಗ ಅಳೋದು ಸರಿಯಲ್ಲ. ಅವರೆಲ್ಲ ಲೀಡರ್‌ಗಳು. ಹೀಗೆ ಅಳೋದು ಸರಿಯಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಣ್ಣೀರು ಹಾಕಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಭಾರ ಕಡಿಮೆ ಆಗುತ್ತೆ. ಮನಸು ಹಗರು ಆಗುತ್ತೆ. ಡಿಕೆ ಸುರೇಶ್ ಸೋತಿದ್ದಕ್ಕೆ ಅವರು ಅತ್ತರು. ಅಭಿವೃದ್ಧಿ ಮಾಡಿ ಸೋತ್ರು ಎಂದು ಅತ್ತರು. ಆದರೆ ಚುನಾವಣೆ ಬಂದಾಗ ಅಳೋದು ಸರಿಯಲ್ಲ.
ಅವರೆಲ್ಲ ಲೀಡರ್‌ಗಳು. ಹೀಗೆ ಅಳೋದು ಸರಿಯಲ್ಲ ಎಂದು ತಿರುಗೇಟು ಕೊಟ್ಟರು. ಇನ್ನೂ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಎಲ್ಲಾ ಮತಗಳ ಮೇಲೆ ಕಣ್ಣು ಇಟ್ಟಿರುತ್ತಾರೆ.ಆದರೆ ಜನ ಎಲ್ಲವನ್ನೂ ತೀರ್ಮಾನ ಮಾಡ್ತಾರೆ. ಏನು ಕೆಲಸ ಮಾಡುತ್ತಾರೆ ಏನು ಅಭಿವೃದ್ಧಿ ಮಾಡುತ್ತಾರೆ ಎಂದು ಜನ ನೋಡಿ ಮತ ಹಾಕುತ್ತಾರೆ. ಚನ್ನಪಟ್ಟಣ ಕಾಂಗ್ರೆಸ್ ಪರ ಇದೆ. ಈಗ ವಾತಾವರಣ ಶುರುವಾಗಿದೆ ಎಂದು ತಿಳಿಸಿದರು.