ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಸೇರಿ ಮೂವರ ವಿರುದ್ಧ ಎಫ್‌ಐರ್ ದಾಖಲು
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರಷ್ಟೇ ಅಲ್ಲದೆ, ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಹೌದು ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.