ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಅವರು ಕಾರು ಮೂಲಕ ಆಗಮಿಸಿದ್ದಾರೆ. ಬಳಿಕ ಮುಡಾ ಕೇಸ್ಗೆ ಸಂಬಂಧ ಪಟ್ಟಂತೆ ಲೋಕಾಯುಕ್ತ ಎಸ್ಪಿ ಉದೇಶ್ ಮುಂದೆ ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎ1 ಆರೋಪಿಯಾಗಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.