ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR
ಹಾವೇರಿ: ವಕ್ಫ್ ಅಂತಾ ನಮೂದಾದ ಹಿನ್ನೆಲೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಪ್ಪು ಮಾಹಿತಿ ನೀಡಿದ ಆಧಾರದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ವಕ್ಫ್ ಅಂತಾ ನಮೂದಾದ ಹಿನ್ನೆಲೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿಲ್ಲ. ವಕ್ಫ್ ಎಂದು ನಮೂದಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಕರಣ ದಾಖಲಾಗಿರುವುದಿಲ್ಲ. ಆದರೆ, ರೈತ ಸಾಲಬಾಧೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.