ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!
ನವದೆಹಲಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದ್ರೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.