ಟಾಕ್ಸಿಕ್ ಗಾಗಿ ಮರ ಕಡಿದ ಆರೋಪ: FIR ದಾಖಲಿಸಿದ ಅರಣ್ಯ ಇಲಾಖೆ
ಬೆಂಗಳೂರು: ಯಶ್ ಟಾಕ್ಸಿಕ್ ಚಿತ್ರದ ಶೂಟಿಂಗ್‌ಗಾಗಿ ಸೆಟ್ ಹಾಕಲು HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದಿರುವ ಆರೋಪ ಕೇಳಿಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಹೌದು ವಕೀಲರೊಬ್ಬರು ಮೊದಲಿಗೆ ಈ ಬಗ್ಗೆ ದೂರು ಸಲ್ಲಿಸಿದ್ದರು.
ಇತ್ತೀಚೆಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೆ, ಎಚ್ಎಂಟಿ ಕೆಲ ನಿಯಮಗಳನ್ನು ಮುರಿದಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್ಐಆರ್ ದಾಖಲಾಗಿದೆ.






