ಬೊಂಬೆನಾಡಲ್ಲಿ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ: ರಾಜಾ-ರಾಣಿ, ಸೇರಿದಂತೆ ವಿಶೇಷ ಬೊಂಬೆಗಳು
ರಾಮನಗರ: ಮೂರು ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಬಿರುಸುಗೊಂಡಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯತ್ತ ತಂಡೋಪತಂಡವಾಗಿ ಬರುತ್ತಿದ್ದಾರೆ. ಮತದಾರರಲ್ಲಿ ಬಹಳ ಉತ್ಸಾಹ ಕಂಡುಬರುತ್ತಿದ್ದು, ಇನ್ನೂ ಈ ಪೈಕಿ ಚನ್ನಪಟ್ಟಣ ಕ್ಷೇತ್ರ ವಿವಿಧ ಕಾರಣಗಳಿಂದ ಹೆಚ್ಚು ಸದ್ದು ಮಾಡಿದೆ.
ಚನ್ನಪಟ್ಟಣ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಚುನಾವಣಾ ಆಯೋಗ ಗೊಂಬೆ ಮತಗಟ್ಟೆ ನಿರ್ಮಾಣ ಮಾಡಿದೆ. ಈ ಮೂಲಕ ಚನ್ನಪಟ್ಟಣ ಗೊಂಬೆಗಳ ವಿಶೇಷ ಪ್ರಾಶಸ್ತ್ಯ ನೀಡಿದೆ.
ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ ಕಂಡು ಹರ್ಷಗೊಂಡಿದ್ದಾರೆ.