ಶಾಸಕರಿಗೆ ಆಮಿಷ ತೋರಿಸೋದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಶಾಸಕರಿಗೆ ಆಮಿಷ ತೋರಿಸೋದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ ಎಂದು ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ನವರು ಸರ್ಕಾರ ಅಸ್ಥಿರಗೊಳಿಸಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ಹಾಗಾಗಿಯೇ ನಮ್ಮ ಶಾಸಕರಿಗೆ ಆಮಿಷವೊಡ್ಡುವ ಪ್ರಯತ್ನ ಮಾಡ್ತಿದ್ದಾರೆ.
ಅದು ಸಾಧ್ಯವಿಲ್ಲ ಅಂತ ಗೊತ್ತಿದ್ದರೂ ಮುಂದುವರಿಸಿದ್ದಾರೆ. ಬಿಜೆಪಿಯವರ ಆಮಿಷದಿಂದ ನಮಗೆ ಯಾವುದೇ ಆತಂಕ ಇಲ್ಲ, ನಮ್ಮ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಜೆಡಿಎಸ್ ಎಲ್ಲ ಪ್ರಯತ್ನ ಮಾಡ್ತಿದ್ದಾರೆ. ಶಾಸಕರಿಗೆ ಆಮಿಷ ತೋರಿಸೋದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ನಾವು ಸರ್ಕಾರ ಕೆಡವಲು, ಅಸ್ಥಿರಗೊಳಿಸಲು ಬಿಡೋದಿಲ್ಲ, ನಾವು ಇದನ್ನು ಎದುರಿಸ್ತೇವೆ ಎಂದು ಹೇಳಿದರು.