ಮುಡಾ ಕೇಸ್: ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಬಿಜೆಪಿ ಜೆಡಿಎಸ್ ನಾಯಕರು ಈ ಮುಡಾ ಹಗರಣವನ್ನೇ ಅಸ್ತವಾಗಿಸಿಕೊಂಡು ಸರ್ಕಾರದ ವಿರುದ್ಧ ಪಾದಯಾತ್ರೆ, ಪ್ರತಿಭಟನೆಗಳನ್ನು ನಡೆಸಿದ್ದರು. ಇದರಿಂದ ಸಿಎಂ ಸಿದ್ದರಾಮಯ್ಯ ಸಾಕಷ್ಟು ಕುಗ್ಗಿಹೋಗಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಸಿದ್ದು ಬೆನ್ನಿಗೆ ನಿಂತಿದೆ. ಇನ್ನೂ ಇದರ ಮದ್ಯೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ವಿಭಾಗೀಯಪೀಠ ನಿಗದಿಪಡಿಸಿದೆ.
ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು ನವೆಂಬರ್ 23ರಂದು ವಿಚಾರಣೆ ನಡೆಸಲಿದೆ.