ರಾಜೀನಾಮೆ ಸನ್ನಿಹಿತವಾಗಿದೆ ಎಂದು ಸಿಎಂಗೂ ಮನವರಿಕೆಯಾಗಿದೆ: ವಿಜಯೇಂದ್ರ
ಬೆಂಗಳೂರು: ರಾಜೀನಾಮೆ ಸನ್ನಿಹಿತವಾಗಿದೆ ಎಂದು ಸಿಎಂಗೂ ಮನವರಿಕೆಯಾಗಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ಘಟಾನುಘಟಿಗಳು ಸಾವಿರಾರು ಕೋಟಿ ರೂ. ಹಣ ಇಟ್ಟುಕೊಂಡು ಕಾಂಗ್ರೆಸ್ ಶಾಸಕರನ್ನೇ ಖರೀದಿಸುತ್ತಿದ್ದಾರೆಂಬ ಮಾಹಿತಿ ನಮಗೂ ಬಂದಿದೆ.
ನಮಗೆ ಮಾಹಿತಿ ಬಂದಿದೆ ಅಂತಾದರೆ ಸಹಜವಾಗಿ ಸಿಎಂಗೂ ಬಂದಿರುತ್ತೆ. ಕಾಂಗ್ರೆಸ್ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿಯ ಮೇಲೆ ಸಿಎಂ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜೀನಾಮೆ ಸನ್ನಿಹಿತವಾಗಿದೆ ಎಂದು ಸಿಎಂಗೂ ಮನವರಿಕೆಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನೇರವಾಗಿ ಬಿಜೆಪಿ ಮೇಲೆ ಆರೋಪ ಹೊರಿಸಿದ್ದಾರೆ. ವಾಸ್ತವಿಕವಾಗಿ ಸಿಎಂ ಮತ್ತು ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. 5-6 ಹಿರಿಯ ಮುಖಂಡರಿಂದ ಸಿದ್ದರಾಮಯ್ಯರನ್ನು ಇಳಿಸಬೇಕು ಅಂತಾ ಕಾಂಗ್ರೆಸ್ನಲ್ಲೇ ಪ್ರಯತ್ನ ನಡೆದಿದೆ ಎಂದು ತಿರುಗೇಟು ನೀಡಿದ್ದಾರೆ.



