ನಾನು JDSಗೆ ಬರಲು ಆದಿಚುಂಚನಗಿರಿಯ ಹಿರಿಯ ಸ್ವಾಮೀಜಿಗಳು ಕಾರಣ: ಸಚಿವ ಜಮೀರ್ ಅಹ್ಮದ್
ಮಂಗಳೂರು: ನಾನು ಜೆಡಿಎಸ್‌ಗೆ ಬರಲು ಆದಿಚುಂಚನಗಿರಿಯ ಹಿರಿಯ ಸ್ವಾಮೀಜಿಗಳು ಕಾರಣ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಸ್ಚಾಮೀಜಿ ಬಳಿ ಕೇಳಲು ಹೇಳಿ. ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ. ಕುಮಾರಸ್ವಾಮಿ ಅವರಲ್ಲಿ ಕೇಳಿ ಎಂದು ಟಾಂಗ್ ಕೊಟ್ಟರು. ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ?
ಯೂಟರ್ನ್ ಕುಮಾರಸ್ವಾಮಿ ಅಂತ ಅವರಿಗೆ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಅವರು. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು. ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ. ಒಕ್ಕಲಿಗರಿಗೆ ಯಾವ ಹೇಳಿಕೆ ನೀಡಿಲ್ಲ. ಜನತಾದಳಕ್ಕೆ ಬರಲು ಕಾರಣ ಆದಿ ಚುಂಚನಗಿರಿ ಹಿರಿಯ ಸ್ವಾಮೀಜಿ. ನಾನು ಮಠದ ಹುಡುಗ, ಆದಿಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು ಎಂದು ತಿಳಿಸಿದರು.






