ಡ್ರಗ್ಸ್ ವಿರುದ್ಧ ಕ್ರಮಕ್ಕೆ ನಮ್ಮ ಸರ್ಕಾರ ಸಮರ ಸಾರಿದೆ: ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ಡ್ರಗ್ಸ್ ವಿರುದ್ಧ ಕ್ರಮಕ್ಕೆ ನಮ್ಮ ಸರ್ಕಾರ ಸಮರ ಸಾರಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಡ್ರಗ್ಸ್ ವಿರುದ್ಧ ಕ್ರಮಕ್ಕೆ ಸರ್ಕಾರ ಸಮರ ಸಾರಿದೆ. ಎಲ್ಲೆಡೆ ಕಡಿವಾಣ ಹಾಕಲು ತೀರ್ಮಾನ ಮಾಡಲಾಗಿದೆ. ಶಾಲಾ, ಕಾಲೇಜುಗಳ ಬಳಿ ಡ್ರಗ್ಸ್ ಚಾಕಲೇಟ್ ರೂಪದಲ್ಲಿ ಮಾರಾಟವಾಗುತ್ತಿವೆ ಎಂಬ ಮಾಹಿತಿ ಬಂದರೆ ಕೂಡಲೇ ಮೆಡಿಕಲ್ ಶಾಪ್ಗಳ ಲೈಸನ್ಸ್ ರದ್ದು ಮಾಡಲು ಕ್ರಮ ವಹಿಸಲಾಗುವುದು.
ಆನೇಕಲ್ ಭಾಗದಲ್ಲಿ ಪೊಲೀಸರು ಹೆಚ್ಚು ದಾಳಿ ಮಾಡುತ್ತಿದ್ದಾರೆ. ಬೇರೆ ರಾಜ್ಯದಿಂದ ಡ್ರಗ್ಸ್ ಬರುತ್ತಿದ್ದುದನ್ನು ಪೊಲೀಸರು ಹಿಡಿದಿದ್ದಾರೆ. ಹೊರ ದೇಶದಿಂದ ಬಂದು ಡ್ರಗ್ಸ್ ಮಾರಾಟ ಮಾಡುವವರ ಮಾಹಿತಿಯನ್ನು ಹೈ ಕಮಿಷನ್ ಹಾಗೂ ರಾಯಭಾರಿಗಳಿಗೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಏರ್‌ಪೋರ್ಟ್ ಡ್ರಗ್ಸ್ ಮೂಲಕ ಸಿಕ್ಕಾಪಟ್ಟೆ ಬರುತ್ತಿದೆ. ವಿಶಾಖಪಟ್ಟಣದಲ್ಲಿ ಒಂದೂವರೆ ಸಾವಿರ ಕೆ.ಜಿ ಡ್ರಗ್ಸ್ ಹಿಡಿದಿದ್ದಾರೆ” ಎಂದು ಹೇಳಿದರು.