ಎನ್ಕೌಂಟರ್ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ: ನಾಲ್ವರು ಪರಾರಿ!

Date:

ಎನ್ಕೌಂಟರ್ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ: ನಾಲ್ವರು ಪರಾರಿ!

ಉಡುಪಿ: ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ.ನಕ್ಸಲ್‌ ನಿಗ್ರಹ ದಳ ಮತ್ತು ನಕ್ಸಲರ ಮಧ್ಯೆ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿದೆ. ಈ ಘಟನೆಯಲ್ಲಿ ಓರ್ವ ಹತನಾಗಿದ್ದಾನೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.
ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್‌ ಕೂಂಬಿಂಗ್ ನಡೆಸುತ್ತಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್‌ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...