No menu items!
17 C
Munich
Monday, May 25, 2026

ಮಾಜಿ ಅಬಕಾರಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ!

Must read

ಮಾಜಿ ಅಬಕಾರಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ!

ಹಾವೇರಿ:- ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ ಹೊಂದಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಹಾನಗಲ್​ನ ಎನ್​​ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅವರ ಹುಟ್ಟೂರು ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

- Advertisement -spot_img

More articles

- Advertisement -spot_img

Latest article