ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಸದ್ಯ ಬೆನ್ನು ನೋವಿಗಾಗಿ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ.
ಕೊಲೆ ಕೇಸ್‌ನ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದಂತ ನಟ ದರ್ಶನ್ ಅವರು ವೈದ್ಯಕೀಯ ಮಧ್ಯಂತರ ಜಾಮೀನು ಪಡೆದು, ಜೈಲಿನಿಂದ ಬಿಡುಗಡೆಯಾಗಿ, ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರು ಸಾಮಾನ್ಯ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ನವೆಂಬರ್.26ಕ್ಕೆ ಮುಂದೂಡಿಕೆ ಮಾಡಿದೆ.