24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡಲು ಸಿದ್ಧ: ಎಚ್‍ಡಿಕೆ

Date:

ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ ಕೇವಲ 24 ಗಂಟೆಯೊಳಗಾಗಿ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುವುದಾಗಿ ಜೆಡಿಎಸ್ ನಾಯಕ ಎಚ್‍ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಈಗ ರೈತರ ಪರಿಸ್ಥತಿ ತುಂಬಾ ಶೋಚನೀಯವಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತುಂಗ ಭದ್ರಾ ಸೇರಿದಂತೆ ರಾಜ್ಯ ಅನೇಕ ಅಣೆಕಟ್ಟುಗಳಲ್ಲಿ ವ್ಯವಸಾಯಕ್ಕೆ ಬೇಕಾದಷ್ಟು ಪ್ರಮಾಣದಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ರೈತರ ಬೆಳೆಗಳೆಲ್ಲಾ ನಾಶವಾಗಿದೆ. ಕಳೆದ ವರ್ಷ ಹತ್ತಿ ಬೆಳೆ ನಾಶವಾಗಿದ್ದ ಕಾರಣ ಕೋಟ್ಯಾಂತರ ರೂ ನಷ್ಟವಾಗಿದೆ. ಪ್ರತೀ ದಿನ ಮೂರ್ನಾಲ್ಕು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸರ್ಕಾರ ಇದನ್ನು ಲಘುವಾಗಿ ಪರಿಣಮಿಸಿದೆ ಎಂದು ಎಚ್‍ಡಿಕೆ ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ರಾಜ್ಯದ ರೈತರಿಗೆ ಸರಿಯಾದ ಬೆಳೆ ಲಭ್ಯವಾಗ್ತಾ ಇಲ್ಲ ಬಂದಂತಹ ಬೆಳೆಗೆ ಸರಿಯಾದ ಮಾರುಕಟ್ಟೆ ಬೆಲೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ದಾಳಿಂಬೆ ಬೆಳೆಗಾರರ ಸ್ಥಿತಿಯಂತೂ ಹೇಳತೀರದಾಗಿದ್ದು, ರೈತಿಗೆ ಮುಂದೇನು ಮಾಡಬೇಕೆಂದು ತೋಚದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರು ಮುಂದಿನ ದಿನಗಳಲ್ಲಿ ಆತ್ಮಹತ್ಯೆಗೆ ಶರಣಾಗಬಾರದು. ಇದರಿಂದ ನಿಮ್ಮ ಕುಟುಂಬ ಬೀದಿ ಪಾಲಾಗುತ್ತದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರ ಗದ್ದುಗೆ ಹಿಡಿಯುತ್ತದೆ. ಅಧಿಕಾರ ಬಂದ ಕೇವಲ 24 ತಾಸುಗಳಲ್ಲಿ ರೈತರ ಎಲ್ಲಾ ಸಾಲ ಮನ್ನಾ ಮಾಡುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಯಾವ ರೈತರೂ ಸಾಲ ಮನ್ನಾ ಮಾಡಿ ಎಂದು ಕೇಳಿಕೊಂಡಿರಲಿಲ್ಲ. ಆದರೂ 2,500 ಕೋಟಿ ರೈತರ ಸಾಲ ಮನ್ನಾ ಮಾಡಿರುವುದಾಗಿ ಹೇಳಿದ್ದಾರೆ.
ಇನ್ನು ಮಹಾದಾಯಿ, ಕಾವೇರಿ, ಕೃಷ್ಣಾ ನದಿ ನೀರಿನ ವಿಚಾರಕ್ಕೆ ಬಂದರೆ ರಾಜ್ಯದ ಜನತೆಗೆ ತುಂಬಾ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ನಾನು ಹೋರಾಟ ಆರಂಭಿಸಲು ನಿರ್ಧರಿಸಿದ್ದೇನೆ. ಮುಂದಿನ ನವೆಂಬರ್ 1 ರಿಂದ ನನ್ನ ಹೋರಾಟ ಆರಂಭಗೊಳ್ಳಲಿದ್ದು, ತಿಂಗಳಿನಲ್ಲಿ 10 ದಿನಗಳ ಕಾಲ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ನಿಮ್ಮ ಸಲಹೆ ಸಹಕಾರ ಹೀಗೆ ಮುಂದುವರೆಯಲಿ. ಜನರ ಕಷ್ಟಗಳಿಗೆ ಸ್ಪಂದಿಸೋದೆ ನನ್ನ ಮೊದಲ ಆದ್ಯತೆ ಎಂದರು.

Like us on Facebook  The New India Times

POPULAR  STORIES :

ಹೌದು ಸ್ವಾಮಿ.. ಪ್ರಥಮ್‍ಗೆ ಬಿಗ್‍ಬಾಸ್ ಕರ್ದೇ ಇರ್ಲಿಲ್ವಂತೆ..!

ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!

ಪ್ರಧಾನಿ ಅಂಗಳಕ್ಕೆ ತಲುಪಿದ ಜಗನ್-ಚಂದ್ರಬಾಬು ಬ್ಲಾಕ್‍ಮನಿ ಫೈಟ್..!

ಇನ್ನು ಕ್ರಿಕೆಟ್ ಮೈದಾನದಲ್ಲಿ 14 ಜನ ಫೀಲ್ಡರ್..!

ಪುಣೆಯಲ್ಲಿ ಭುಗಿಲೆದ್ದ ದಲಿತರು-ಮರಾಠರ ಸಂಘರ್ಷ..!

ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!

ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...