ಕಿಡ್ನಿ ಸ್ಟೋನ್ ಆಗಿದ್ದ್ಯಾ!? ಇಲ್ಲಿ ಕೇಳಿ ಆಪರೇಷನ್ ಮಾಡಿಸದೆ ಮನೆಯಲ್ಲೇ ಹೀಗೆ ಮಾಡಿ! 100℅ ರಿಸಲ್ಟ್!
ಮನುಷ್ಯನ ಜೀವನ ಶೈಲಿಯು ಆತನ ದೇಹದ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮವನ್ನು ಉಂಟುಮಾಡುತ್ತದೆ. ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಮನುಷ್ಯ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದ್ದು, ಆತನ ಜೀವನ ವಿಧಾನದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ.
ನೂತನ ಆಹಾರ ಪದ್ದತಿಗಳಿಂದಾಗಿ ನಮ್ಮ ದೇಹದಲ್ಲಿ ಹಲವು ಸಮಸ್ಯೆಗಳನ್ನು ಕಾಣಬಹುದಾಗಿದ್ದು ಅವುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿರುವ ಕಿಡ್ನಿ ಸ್ಟೋನ್ ಸಮಸ್ಯೆಯೂ ಕೂಡಾ ಒಂದು. ಇದನ್ನು ಹೋಗಲಾಡಿಸಲು ಕೆಲವರು ಆಪರೇಷನ್ ಮೊರೆ ಹೋಗ್ತಾರೆ. ಆದ್ರೆ ಮನೆಯಲ್ಲೇ ಹೀಗೆ ಮಾಡೋದ್ರಿಂದ ಕಿಡ್ನಿ ಸ್ಟೋನ್ ಕಡಿಮೆ ಮಾಡಬಹುದು.
ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಕಿಡ್ನಿ ಸ್ಟೋನ್ ಗಳನ್ನು ಹೋಗಲಾಡಿಸಬಹುದು.ಕೆಲವು ಹಣ್ಣುಗಳನ್ನು ಸೇವಿಸಿದರೆ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ಎಳ ನೀರು,ಕಲ್ಲಂಗಡಿ, ಖರ್ಬೂಜ ಮುಂತಾದ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಇರುತ್ತದೆ. ಹಾಗಾಗಿ ನೀರು ಹೆಚ್ಚಿನ ಪ್ರಮಾಣದಲ್ಲಿ ಇರುವ ಈ ಹಣ್ಣುಗಳನ್ನು ಪ್ರತಿದಿನ ಸೇವಿಸಬೇಕು. ಏಕೆಂದರೆ ನೀರಿನಂಶವಿರುವ ಆಹಾರಗಳು ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ
ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿವೆ.ಕಿಡ್ನಿ ಸ್ಟೋನ್ ಗಳನ್ನು ಕರಗಿಸಲು ಇದು ಸಹಾಯ ಮಾಡುತ್ತದೆ.ಸಿಟ್ರಸ್ ಹಣ್ಣುಗಳು ಮತ್ತು ಜ್ಯೂಸ್ ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತವೆ. ಕಿತ್ತಳೆ,ಮೋಸಂಬಿ,ಮತ್ತು ದ್ರಾಕ್ಷಿಯನ್ನು ಸೇವಿಸಿದರೆ ಕಿಡ್ನಿ ಸ್ಟೋನ್ ಕರಗುವುದು.
ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕ್ಯಾಲ್ಸಿಯಂ ಹೇರಳವಾಗಿರುವ ಪದಾರ್ಥಗಳನ್ನು ಸೇವಿಸಬೇಕು. ಇದಕ್ಕಾಗಿ ಕಪ್ಪು ದ್ರಾಕ್ಷಿ, ಅಂಜೂರದ ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು.