ಮಿನಿ ಬಸ್ ಪಲ್ಟಿ: ಕಾಂತಾರ ತಂಡದ ಜೂನಿಯರ್ ಕಲಾವಿದರು ಗಂಭೀರ!
ಉಡುಪಿ:- ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಜಡ್ಕಲ್ ಬಳಿ ತಡರಾತ್ರಿ ಬಸ್ ಅಪಘಾತಕ್ಕೀಡಾಗಿದೆ.
ಕಾಂತಾರ ಸಿನಿಮಾದ ಶೂಟಿಂಗ್ ಸ್ಥಳಕ್ಕೆ 20 ಕಲಾವಿದರು ಆಗಮಿಸುತ್ತಿದ್ದಾಗ ದುರ್ಘಟನೆ ನಡೆದಿದೆ. ಆರು ಕಲಾವಿದರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ರಿಷಬ್ ಶೆಟ್ಟಿ ಅವರ ಕಾಂತಾರ ಚಾಪ್ಟರ್ 1 ಸಿನಿಮಾದ ಚಿತ್ರೀಕರಣವು ಅದ್ದೂರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಕೊಲ್ಲೂರಿನಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಈ ಚಿತ್ರದ ಜ್ಯೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.