ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಗರಣ: BBMP ಇಬ್ಬರು ಅಧಿಕಾರಿಗಳ ಮನೆ ಮೇಲೆ “ಲೋಕಾ” ದಾಳಿ!
ಬೆಂಗಳೂರು:- ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಗರಣ ನಡೆದ ಹಿನ್ನೆಲೆ, BBMP ಇಬ್ಬರು ಅಧಿಕಾರಿಗಳ ಮನೆ ಮೇಲೆ “ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದೇವಯ್ಯ ಪಾರ್ಕ್ ಬಳಿ ಇರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಾಡಿ, ದಾಖಲೆ ಪರಿಶೀಲನೆ ನಡೆಸುತ್ತಿದೆ.
ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನೀಲ್ ವೈ ನಾಯಕ್ ನೇತೃತ್ವದಲ್ಲಿ ಎಂಟು ತಂಡಗಳು ಬೆಳಗ್ಗೆ 6.30ರ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿವೆ. ಕಚೇರಿಗಳಲ್ಲಿ ಹೆಚ್ಚು ದಾಖಲೆ ಪರಿಶೀಲನೆ ಮಾಡುತ್ತಿದೆ