ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಇಂದು ಹೈಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಿತು, ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನ ತನಿಖೆಯ ಲೋಪದೋಷಗಳನ್ನು ನ್ಯಾಯಾಲಯ ಮುಂದಿಟ್ರು. ಸಿವಿ ನಾಗೇಶ್ ಸತತ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.
A1 ಆರೋಪಿ ಪವಿತ್ರಾಗೌಡ, A2 ನಟ ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಮತ್ತು ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಿತು. ಇದೀಗ ಬೇಲ್ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಸುದಿರ್ಘ ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್, ಬೇಲ್ ಅರ್ಜಿಯನ್ನು ಮುಂದೂಡಿಕೆ ಮಾಡಿದೆ.