ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು: ವರದಿಯಲ್ಲಿ ಕಾರಣ ಬಹಿರಂಗ
ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗಳಿಗೆ ಆದೇನಾಗಿದೆಯೋ ಗೊತ್ತಿಲ್ಲ. ಬಾಣಂತಿಯರ ಸರಣಿ ಸಾವುಗಳಿಗೆ ಕಾರಣವಾಗುತ್ತಿದೆ. ಕಳೆದ ಒಂದ ವಾರದ ಅಂತರದಲ್ಲಷ್ಟೇ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸರಣಿ ಸಾವನ್ನಪ್ಪಿದ್ದರೂ, ಈ ಘಟನೆ ಮಾಸುವ ಮುನ್ನವೇ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಓರ್ವ ಬಾಣಂತಿ ಸಾವಾಗಿದೆ. ಬದುಕಿ ಬಾಳ ಬೇಕಿದ್ದ ಬಾಣಂತಿಯರ ಸರಣಿ ಸಾವು, ಇಡೀ ಬಳ್ಳಾರಿ ಜಿಲ್ಲೆಯನ್ನ ಬೆಚ್ಚಿ ಬಿಳಿಸಿದೆ.
ಇದೀಗ 15 ದಿನಗಳಲ್ಲಿ ಐದು ಬಾಣಂತಿಯರ ಸಾವಿಗೆ ಕಾರಣವೇನು ಎಂಬುದು ಕೊನೆಗೂ ಬಹಿರಂಗವಾಗಿದ್ದು, ಬಾಣಂತಿಯರಿಗೆ ಸಿಸೇರಿಯನ್ ವೇಳೆ ನೀಡಿದ್ದ ಕಳಪೆ ಮಟ್ಟದ “IV ಗ್ಲೂಕೋಸ್”ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಲಾಗಿದೆ.
ಐವಿ (ಇಂಟ್ರಾವೆನಸ್ ದ್ರಾವಣ) ಕಳಪೆ ಗುಣಮಟ್ಟದಿಂದ ಕೂಡಿದೆ. ಆದರೂ, ಕೂಡ ವೈದ್ಯರು ಸಿಸೇರಿಯನ್ ವೇಳೆ “IV ಗ್ಲುಕೋಸ್” ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. ಹೀಗಾಗಿ, ಇಂಟ್ರಾವೆನಸ್ ದ್ರಾವಣ (IV ಗ್ಲುಕೋಸ್) ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.